ಡಿಸಿಇಟಿ-2020 ಫಲಿತಾಂಶ ಪ್ರಕಟ
ಬೆಂಗಳೂರು, ಡಿ.5: 2020ನೆ ಸಾಲಿನ ಎರಡನೆ ವರ್ಷದ/ಮೂರನೆ ಸೆಮಿಸ್ಟರ್ ಲ್ಯಾಟರಲ್ ಇಂಜಿನಿಯರಿಂಗ್ ಪ್ರವೇಶಾತಿಗೆ ಸಂಬಂಧಿಸಿದಂತೆ ಡಿಸಿಇಟಿ-2020ರ ಫಲಿತಾಂಶವನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಡಿ.5ರಂದು ಪ್ರಕಟಿಸಲಾಗಿದೆ.
ದಾಖಲೆಗಳ ಪರಿಶೀಲನೆಗೆ ಪ್ರಾಧಿಕಾರದ ವೆಬ್‍ಸೈಟಿನಲ್ಲಿ ನೀಡಿರುವ ವೇಳಾಪಟ್ಟಿ ಪ್ರಕಾರ ಬೆಂಗಳೂರು, ಮೈಸೂರು, ಬಳ್ಳಾರಿ, ಬೆಳಗಾವಿ, ಕಲಬುರ್ಗಿ, ಶಿವಮೊಗ್ಗ, ಮಂಗಳೂರು, ಬಿಜಾಪುರ, ಧಾರವಾಡ, ದಾವಣಗೆರೆ ಯಾವುದಾದರೂ ಸಹಾಯಕ ಕೇಂದ್ರದಲ್ಲಿ ಖುದ್ದಾಗಿ ಹಾಜರಿರಬೇಕು.
ಎಸ್‍ಓಪಿ ಅನುಸಾರ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು ಮತ್ತು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು. ವಿವರವಾದ ವೇಳಾಪಟ್ಟಿಯನ್ನು ಹಾಗೂ ಮೊದಲನೆ ಸುತ್ತಿನ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.
ಯುಜಿನೀಟ್-2020 ವೈದ್ಯಕೀಯ, ದಂತ ವೈದ್ಯಕೀಯ ಎರಡನೆ ಸುತ್ತಿನ ಸೀಟು ಹಂಚಿಕೆ: ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರ ಪತ್ರದಂತೆ ಯುಜಿನೀಟ್ 2020ರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕಾಗಿ ಎರಡನೆ ಸುತ್ತಿನ ಸೀಟು ಹಂಚಿಕೆಯನ್ನು ನಡೆಸಲಾಗುವುದು.
ಡಿ.7 ರಿಂದ 10ರವರೆಗೆ ಅಭ್ಯರ್ಥಿಗಳು ಇಚ್ಛೆ/ಆಯ್ಕೆಗಳನ್ನು ಮಾರ್ಪಡಿಸಬಹುದಾಗಿದೆ. ಎರಡನೆ ಸುತ್ತಿನಲ್ಲಿ ಭಾಗವಹಿಸಲು ಅರ್ಹತೆಗಳ ಬಗ್ಗೆ ಈಗಾಗಲೆ ಯುಜಿನೀಟ್ 2020 ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ ಹಾಗೂ ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಹಾಗೂ ಅಪ್ಡೇಟ್ ಮಾಹಿತಿಗಾಗಿ ಪ್ರಾಧಿಕಾರದ ವೆಬ್‍ಸೈಟ್ ಭೇಟಿ ನೀಡುತ್ತಿರುವಂತೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.