×
Ad

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಎಲ್‌ಒಸಿ ದಾಟಿ ಬಂದ ಇಬ್ಬರು ಬಾಲಕಿಯರು

Update: 2020-12-06 13:33 IST

ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಇಬ್ಬರು ಅಪ್ರಾಪ್ತ ಬಾಲಕಿಯರು ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಮೂಲಕ ಭಾರತದ ಕಡೆ ಬಂದಿದ್ದಾರೆ.

ರವಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯರಿಬ್ಬರೂ ಪಿಒಕೆ ಅಬ್ಬಾಸ್‌ಪುರದ ನಿವಾಸಿಗಳೆಂದು ಗುರುತಿಸಲಾಗಿದೆ.

ನಿಯಂತ್ರಣ ರೇಖೆಯ ಉದ್ದಕ್ಕೂ ನಿಯೋಜಿಸಲಾಗಿರುವ ಭಾರತೀಯ ಪಡೆಗಳು ದಾಟುವಿಕೆಯನ್ನು ಪತ್ತೆ ಮಾಡಿವೆ. ಆದಷ್ಟು ಬೇಗನೆ ಬಾಲಕಿಯರನ್ನು ವಾಪಸ್ ಕಳುಹಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News