ಉಡುಪಿ ಜಿಲ್ಲೆಯಲ್ಲಿ 15 ಮಂದಿಗೆ ಕೊರೋನ ಪಾಸಿಟಿವ್

Update: 2020-12-06 15:12 GMT

ಉಡುಪಿ, ಡಿ.6: ಜಿಲ್ಲೆಯಲ್ಲಿ ರವಿವಾರ 15 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 28 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, 170 ಮಂದಿ ಕೊರೋನ ಸೋಂಕಿಗೆ ಈಗಲೂ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 10 ಮಂದಿ ಪುರುಷರು ಹಾಗೂ ಐವರು ಮಹಿಳೆಯರು. ಇವರಲ್ಲಿ ತಲಾ ಐವರು ಪುರುಷರು ಹಾಗೂ ಮಹಿಳೆಯ ರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 10, ಕುಂದಾಪುರ ತಾಲೂಕಿನ 3 ಹಾಗೂ ಕಾರ್ಕಳ ತಾಲೂಕಿನ ಇಬ್ಬರು ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ತಿಳಿಸಿದರು.

28 ಮಂದಿ ಗುಣಮುಖ:  ಶನಿವಾರ ಜಿಲ್ಲೆಯಲ್ಲಿ 28 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,431 ಆಗಿದೆ. ಜಿಲ್ಲೆಯಲ್ಲಿ ಸದ್ಯ 170 ಮಂದಿ ಕೋವಿಡ್‌ಗೆ ಸಕ್ರಿಯರಿದ್ದಾರೆ ಎಂದರು.

1504 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 1520 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1504 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. 16 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,788ಕ್ಕೇರಿದೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಶನಿವಾರದವರೆಗೆ ಒಟ್ಟು 2,56,282 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,33,494 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 22,788 ಮಂದಿ ಈವರೆಗೆ ಪಾಸಿಟಿವ್ ಬಂದಿದ್ದರೆ, ಇವರಲ್ಲಿ 22,431ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿ ದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ. ನ.7ರ ನಂತರ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News