×
Ad

ಕಮ್ಮಟ ನಡೆಸಲು ಅರ್ಜಿ ಆಹ್ವಾನ

Update: 2020-12-06 20:48 IST

ಉಡುಪಿ, ಡಿ.6: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ-ಪರಿಸರಯಾನ ಎಂಬ ರಾಜ್ಯಮಟ್ಟದ ಕಮ್ಮಟವನ್ನು ಡಿ.27ರಿಂದ 29 ರವರೆಗೆ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಇವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿ ನಡೆಸಲು ಉದ್ದೇಶಿಸಿದ್ದು, ಇದಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್-http://karnatakasahithyaacademy.org - ಅನ್ನು ಸಂಪರ್ಕಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News