ಎಸ್ಟಿ ಅಭ್ಯರ್ಥಿಗಳಿಗೆ ಫೆಲೋಶಿಪ್‍ಗೆ ಅರ್ಜಿ ಆಹ್ವಾನ

Update: 2020-12-06 15:33 GMT

ಬೆಂಗಳೂರು, ಡಿ.6: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ನಾಲ್ಕು ಅಭ್ಯರ್ಥಿಗಳಿಗೆ ಫೆಲೋಶಿಪ್‍ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ಗರಿಷ್ಟ 40ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಫೆಲೋಶಿಪ್‍ನ ಅಧ್ಯಯನ ಕಾಲಾವಧಿ 10ತಿಂಗಳ ಇದ್ದು, ನಂತರ ಅಧ್ಯಯನ ವರದಿಯನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. ಆಸಕ್ತರು ಅರ್ಜಿ ನಮೂನೆಯನ್ನು ಪ್ರಾಧಿಕಾರದ ಅಂತರ್‍ಜಾಲ www.kuvempubhashabharathi.org ನಲ್ಲಿ ಡಿ.1ರಿಂದ ಪಡೆಯಬಹುದಾಗಿದೆ.

ಪ್ರಾಧಿಕಾರದ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಅನುವಾದಕ್ಕೆ ಆಯ್ದುಕೊಂಡ ಕೃತಿಯ ಕನಿಷ್ಠ 5 ಪುಟಗಳನ್ನು ಕನ್ನಡಕ್ಕೆ ಅನುವಾದಿಸಿ ಮೂಲ ಭಾಷೆಯ ಪಠ್ಯದೊಂದಿಗೆ ಅಂಚೆ, ಕೋರಿಯರ್ ಮೂಲಕ ಪ್ರಾಧಿಕಾರಕ್ಕೆ ಕಳುಹಿಸಿಕೊಡಲು ಕೋರಿದೆ. ಅರ್ಜಿ ಸಲ್ಲಿಕೆಗೆ ಡಿ.28 ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ. 2318 3311, 2318 3312ಕ್ಕೆ ಸಂಪರ್ಕಿಸಲು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News