ಅಂಬೇಡ್ಕರ್ ಮೌಲ್ಯಗಳು ದಾರಿ ದೀಪವಾಗಲಿ: ಡಾ.ನರಸಿಂಹಮೂರ್ತಿ

Update: 2020-12-06 17:08 GMT

ಬೆಂಗಳೂರು, ಡಿ.6: ಡಾ.ಬಿ.ಆರ್.ಅಂಬೇಡ್ಕರ್ ತಮ್ಮ ಬದುಕಿನಲ್ಲಿ ಅನುಸರಿಸಿದ ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಹಕ್ಕುಗಳನ್ನು ಪಡೆಯಲು ಸಾಧ್ಯವೆಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಡಾ.ನರಸಿಂಹಮೂರ್ತಿ ಅಭಿಪ್ರಾಯಿಸಿದ್ದಾರೆ.

ರವಿವಾರ ಬೆಂಗಳೂರು ನಗರ ವಿಶ್ವವಿದ್ಯಾಲಯದದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ 65ನೇ ಪರಿನಿರ್ವಾಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಮೌಲ್ಯಗಳು, ತತ್ವಗಳು ನಮಗೆ ದಾರಿ ದೀಪವಾಗಲಿಯೆಂದು ಆಶಿಸಿದರು.

ವಿಶ್ವವಿದ್ಯಾಲಯದ ಕುಲಸಚಿವೆ ಆರತಿ ಆನಂದ್ ಮಾತನಾಡಿ, ದೇಶದ ಸರ್ವತೋಮುಖ ಬೆಳವಣಿಗೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅಪಾರ. ಅವರನ್ನು ಸದಾ ನೆನಪು ಮಾಡಿಕೊಳ್ಳುವ ಮೂಲಕ ಅವರ ಚಿಂತನೆ ದಾರಿಯಲ್ಲಿ ಸಾಗೋಣ. ಜಾತಿ, ಧರ್ಮ ಹಾಗೂ ವರ್ಗಗಳ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಬಾಳೋಣವೆಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಬೆಂವಿವಿ ಮೌಲ್ಯಮಾಪನ ಕುಲಸಚಿವ ಡಾ.ರಮೇಶ್, ವಿತ್ತಾಧಿಕಾರಿ ಡಾ.ವೆಂಕಟೇಶ ಮೂರ್ತಿ ಸೇರಿದಂತೆ ಹವವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News