ದುಷ್ಕರ್ಮಿಗಳಿಂದ ವಿಷಪ್ರಾಶನ: ಒಂದೂವರೆ ಸಾವಿರ ಕೋಳಿ ಮರಿಗಳು ಸಾವು
Update: 2020-12-06 22:49 IST
ಮಂಡ್ಯ, ಡಿ.6: ದುಷ್ಕರ್ಮಿಗಳು ವಿಷ ಹಾಕಿದ ಹಿನ್ನೆಲೆಯಲ್ಲಿ ಕೋಳಿ ಫಾರಂನಲ್ಲಿ ಸಾಕಾಣೆ ಮಾಡಿದ್ದ ಸುಮಾರು ಒಂದೂವರೆ ಸಾವಿರ ಕೋಳಿ ಮರಿಗಳು ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಕಿಕ್ಕೇರಿ ಸಮೀಪದ ಸೊಳ್ಳೇಪುರ ಗ್ರಾಮದಲ್ಲಿ ನಡೆದಿದೆ.
ಸೊಳ್ಳೇಪುರ ಗ್ರಾಮದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯರಾಮು ಎಂಬವರಿಗೆ ಸೇರಿದ ಕೋಳಿ ಪಾರಂನಲ್ಲಿ ಈ ಕೃತ್ಯವೆಸಗಿದ್ದು, ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.