ಸಾಮಾಜಿಕ ಮಾಧ್ಯಮ ಸ್ವಾತಂತ್ರ್ಯಕ್ಕೆ ಸರಕಾರ ಕಡಿವಾಣ ಹಾಕಬಾರದು: ಅಟಾರ್ನಿ ಜನರಲ್ ವೇಣುಗೋಪಾಲ್
Update: 2020-12-07 15:12 IST
ಹೊಸದಿಲ್ಲಿ: ಸಾಮಾಜಿಕ ಮಾಧ್ಯಮದಲ್ಲಿ ನಡೆಯುವ ಮುಕ್ತ ಚರ್ಚೆಗಳಿಗೆ ಸರಕಾರವು ಕಡಿವಾಣ ಹಾಕಬಾರದು. ಪ್ರಜಾಪ್ರಭುತ್ವ ಆರೋಗ್ಯಕರವಾಗಿರಲು ಇದು ಅಗತ್ಯವಿದೆ ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ ಎಂದು ndtv.com ವರದಿ ಮಾಡಿದೆ.
ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಸುಪ್ರೀಂಕೋರ್ಟ್ ವ್ಯಕ್ತಿಯ ವಿರುದ್ಧ ನ್ಯಾಯಾಂಗ ನಿಂದನೆಯ ಪ್ರಕ್ರಿಯೆ ಆರಂಭಿಸುತ್ತದೆ. ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ನಡೆಯುವ ಮುಕ್ತ ಚರ್ಚೆಗೆ ಕಡಿವಾಣ ಹಾಕಬಾರದು. ರೇಖೆಯನ್ನು ದಾಟದ ಹೊರತು ಟೀಕೆಗಳಿಗೆ ಸಾಮಾನ್ಯವಾಗಿ ಸುಪ್ರೀಂಕೋರ್ಟ್ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ವೇಣುಗೋಪಾಲ್ ಹೇಳಿದ್ದಾರೆ.