×
Ad

ಈ ಬಾರಿ ಅಧಿವೇಶನದಲ್ಲಿ 'ಲವ್ ಜಿಹಾದ್' ಮಸೂದೆ ಮಂಡಿಸುವುದಿಲ್ಲ: ಸಿಎಂ ಯಡಿಯೂರಪ್ಪ

Update: 2020-12-07 18:04 IST

ಸಾಗರ, ಡಿ.7: ಗೋಹತ್ಯೆ ನಿಷೇಧವನ್ನು ಈ ಬಾರಿಯ ಅಧಿವೇಶನದಲ್ಲಿ ಮಂಡಿಸಲಿದ್ದು, ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾನೂನನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಸಾಗರ ನಗರಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಮೊದಲು ಗೋಹತ್ಯೆ ನಿಷೇಧವನ್ನು ಅಂಗೀಕರಿಸುವಂತೆ ಸದಸನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲರು ತಿರಸ್ಕರಿಸಿದ್ದರು. ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ದೊರೆಯುವ ಭರವಸೆ ಇದೆ ಎಂದರು.

ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆಯನ್ನು ಮಂಡಿಸಲಾಗುವುದು. ಈ ಬಾರಿ ಮಂಡಿಸುವುದಿಲ್ಲವೆಂದು ಇದೇ ವೇಳೆ ತಿಳಿಸಿದರು.

ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಪ್ರಧಾನಿ ಮೋದಿಯವರೇ ಬಂದ್ ಮಾಡದಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ರೈತರು ಸರ್ಕಾರದ ಜೊತೆಗೆ ಕುಳಿತು ಸಮಸ್ಯೆ ಬಗೆಹರಿಸಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News