×
Ad

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ವಿಜಯಶಾಂತಿ

Update: 2020-12-07 18:10 IST

ಹೈದರಾಬಾದ್: ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ನಟಿ-ರಾಜಕಾರಣಿ ವಿಜಯಶಾಂತಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ರವಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ. 

ವಿಜಯಶಾಂತಿ ಅವರು 2014ರಲ್ಲಿ ಕಾಂಗ್ರೆಸ್ ಪಕ್ಷವನ್ನುಸೇರಿದ್ದರು. ವಿಜಯ ಶಾಂತಿ ಅವರು 1997ರಲ್ಲಿ ಬಿಜೆಪಿ ಪಕ್ಷದಲ್ಲಿದ್ದರು. ತೆಲಂಗಾಣ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಯುತ್ತಿದ್ದ ವೇಳೆ ಅವರು ಟಿಆರ್ ಎಸ್ ಮುಖ್ಯಸ್ಥ ಕೆಸಿ ಚಂದ್ರಶೇಖರ್ ರಾವ್ ಅವರೊಂದಿಗೆ ಗುರುತಿಸಿಕೊಂಡಿದ್ದರು.

ಟಿಆರ್ ಎಸ್ ಟಿಕೆಟ್ ನಲ್ಲಿ ಸ್ಪರ್ಧಿಸಿದ್ದ ವಿಜಯಶಾಂತಿ ಮೇದಕ್ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾಗಿದ್ದರು. 2009ರಿಂದ 2014ರ ತನಕ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಟಿ ಆರ್ ಎಸ್ ನ್ನು ತ್ಯಜಿಸಿದ್ದ ವಿಜಯಶಾಂತಿ 2014ರಲ್ಲಿ ಕಾಂಗ್ರೆಸ್ ಗೆ ಸೇರಿದ್ದರು.

ಅಕ್ಟೋಬರ್ ನಲ್ಲಿ ಇನ್ನೋರ್ವ ನಟಿ- ರಾಜಕಾರಿಣಿ ಖುಷ್ಬು ಸುಂದರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News