ಅನಿಯಂತ್ರಿತ ತೈಲಬೆಲೆ ಏರಿಕೆ; ಸರಕಾರಗಳ ವೈಫಲ್ಯ: ರಮೇಶ್ ಕಾಂಚನ್
Update: 2020-12-07 19:10 IST
ಉಡುಪಿ, ಡಿ.7: ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವೈಫಲ್ಯ ಕಂಡಿದೆ ಎಂದು ಉಡುಪಿ ನಗರಸಭಾ ಸದಸ್ಯ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ದರವನ್ನು ನಿಯಂತ್ರಿಸಲು ಆಗದೇ ಪರದಾಡುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ, ಹೇಗೆ ಆಡಳಿತ ನಡೆಸುತ್ತಿದೆ ಎನ್ನುವುದಕ್ಕೆ ಇದೊಂದು ಸ್ಪಷ್ಟ ನಿದರ್ಶನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.