ಎಣ್ಮೂರು: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
Update: 2020-12-07 20:23 IST
ಸುಳ್ಯ : ಎಣ್ಮೂರು ಗ್ರಾಮದ ಕಟ್ಟ ಕಾಲನಿಯಲ್ಲಿ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಎಣ್ಮೂರಿನ ಗೀತಾ (36) ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡು ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಇಲ್ಲಿನ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.