ಶಿವಮೊಗ್ಗದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
Update: 2020-12-07 21:28 IST
ಶಿವಮೊಗ್ಗ, ಡಿ.7: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೋಜ್, ಪ್ರಜ್ವಲ್, ವಿನಯ್, ಸಂದೀಪ್ ಬಂಧಿತ ಆರೋಪಿತರು. ಇವರೆಲ್ಲರೂ 20 ರಿಂದ 23 ವಯಸ್ಸಿನವರು. ಬಂಧಿತರ ಪೈಕಿ ಮನೋಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಉಳಿದವರ ಪೈಕಿ ಒಬ್ಬಾತ ವೈನ್ ಶಾಪ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೊಬ್ಬ ಕೂಲಿ ಕೆಲಸ ಮಾಡುತ್ತಿದ್ದ. ಮತ್ತೋರ್ವ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.