ಬೆಳ್ತಂಗಡಿ : ಅಕ್ರಮ ಗಾಂಜಾ ಸಾಗಾಟ ; ಆರೋಪಿ ಸೆರೆ
Update: 2020-12-07 22:55 IST
ಬೆಳ್ತಂಗಡಿ: ಚಾರ್ಮಾಡಿ ಪೊಲೀಸ್ ಚೆಕ್ ಪೊಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಾಶಿಬೆಟ್ಟು ನಿವಾಸಿ ಮಹಮ್ಮದ್ ನಬಾನ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.