×
Ad

ಆದ್ಯತೆಯ ಮೇರೆಗೆ ಅತಿಥಿ ಶಿಕ್ಷಕ-ಉಪನ್ಯಾಸಕರ ನೇಮಕ: ಸಚಿವ ಸುರೇಶ್ ಕುಮಾರ್

Update: 2020-12-07 23:29 IST

ಬೆಂಗಳೂರು, ಡಿ.7: ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಆರಂಭವಾದ ಕೂಡಲೇ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಆದ್ಯತೆಯ ಮೇರೆಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸೋಮವಾರ ಮೇಲ್ಮನೆಯಲ್ಲಿ ಸುಶೀಲ್ ಜಿ.ನಮೋಶಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೆಪ್ಟೆಂಬರ್-ಅಕ್ಟೋಬರ್‍ನಲ್ಲಿ ಶಾಲೆ ಮತ್ತು ಕಾಲೇಜುಗಳು ಆರಂಭವಾಗುವ ನಿರೀಕ್ಷೆಯಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹೀಗಾಗಿ, ಶಾಲಾ-ಕಾಲೇಜುಗಳು ಆರಂಭವಾದ ಕೂಡಲೇ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News