ರಾಜಕೀಯ ಅಸ್ತಿತ್ವಕ್ಕಾಗಿ ರೈತರನ್ನು ದಾರಿ ತಪ್ಪಿಸುತ್ತಿರುವ ಪ್ರತಿಪಕ್ಷಗಳು: ಯಡಿಯೂರಪ್ಪ ಆರೋಪ
Update: 2020-12-08 14:57 IST
ಬೆಂಗಳೂರು,ಡಿ.7: ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.