×
Ad

ನಾಲ್ಕೇ ದಿನಕ್ಕೆ ಅಂತ್ಯಗೊಳ್ಳಲಿರುವ ವಿಧಾನಸಭೆ ಚಳಿಗಾಲದ ಅಧಿವೇಶನ

Update: 2020-12-08 15:35 IST

ಬೆಂಗಳೂರು, ಡಿ.7: ಶೀಘ್ರವೇ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿರುವ ಕಾರಣ ವಿಧಾನಸಭೆಯ ಕಲಾಪವನ್ನು ಡಿ.10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.

ಈ ಬಗ್ಗೆ ಸದನ ಕಲಾಪ ಸಮಿತಿ ಸಭೆಯ‌ ಬಳಿಕ‌ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಸಭಾ ಅಧಿವೇಶನ ಗುರುವಾರಕ್ಕೆ ( ಡಿ.10) ಅಂತ್ಯಗೊಳಿಸಲು ತೀರ್ಮಾನ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನ ಡಿ.15ರ ವರೆಗೆ ನಡೆಯಬೇಕಿತ್ತು. ಆದರೆ ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಕೊರೋನ ಹಿನ್ನೆಲೆಯಲ್ಲಿ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಕ್ತಾಯಗೊಳಿಸಲು ಸರಕಾರ ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News