ವಿಶ್ವ ಮಾನವ ಹಕ್ಕುಗಳ ದಿನಾಚರಣೆ
Update: 2020-12-08 19:24 IST
ಉಡುಪಿ, ಡಿ.8: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10ರಂದು ಬೆಳಗ್ಗೆ 11:30ಕ್ಕೆ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಆಚರಿಸಲಾಗುವುದು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ಉದ್ಘಾಟಿಸಲಿದ್ದು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಉಪಸಭಾಪತಿ ಡಾ. ಅಶೋಕ್‌ಕುಮಾರ್ ವೈ.ಜಿ, ಗೌರವ ಕಾರ್ಯದರ್ಶಿ ಕೆ.ಜಯರಾಮ ಆಚಾರ್ಯ ಸಾಲಿಗ್ರಾಮ, ಗೌರವ ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ ಮತ್ತು ರೆಡ್‌ಕ್ರಾಸ್‌ನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.