ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ
Update: 2020-12-08 19:27 IST
ಉಡುಪಿ, ಡಿ. 8: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ವತಿಯಿಂದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯು ಡಿ.11ರಂದು ಬೆಳಗ್ಗೆ 10:30ಕ್ಕೆ ಉಡುಪಿ ಜಿಲ್ಲಾ ಗೃಹ ರಕ್ಷಕ ದಳದ ಕಚೇರಿ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್ ಭಾಗವಹಿಸಲಿದ್ದು, ಜಿಲ್ಲಾ ಕಮಾಂಡೆಂಟ್ ಡಾ.ಕೆ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಗೃಹರಕ್ಷಕ ದಳ ದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.