×
Ad

ಭಾರತ್ ಬಂದ್‌ಗೆ ಬೆಂಬಲವಾಗಿ ಪ್ರತಿಭಟನೆ: ಪ್ರತಿಕೃತಿ ದಹಿಸಿ ಆಕ್ರೋಶ

Update: 2020-12-08 20:24 IST

ಉಡುಪಿ, ಡಿ. 8: ಕೇಂದ್ರ ಸರಕಾರದ ರೈತ ವಿರೋಧಿ ಕಾಯಿದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲವಾಗಿ ಇಂದು ವಿವಿಧ ಸಂಘಟನೆಗಳು ಉಡುಪಿ, ಕುಂದಾಪುರ, ಬೈಂದೂರುಗಳಲ್ಲಿ ಪ್ರತಿಭಟನೆ ನಡೆಸಿದವು. ಇದೇ ವೇಳೆ ಕುಂದಾಪುರ ಹಾಗೂ ಉಡುಪಿಯಲ್ಲಿ ಕೇಂದ್ರ ಸರಕಾರ ಹಾಗೂ ಮೋದಿಯ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿತು.

ಜಿಲ್ಲೆಯ ಸಿಐಟಿಯು, ಕಿಸಾನ್ ಕಾಂಗ್ರೆಸ್, ಕರ್ನಾಟಕ ಪ್ರಾಂತ ರೈತ ಸಂಘ, ಭಾರತ ರಾಷ್ಟ್ರೀಯ ಕಾಂಗ್ರೆಸ್, ಸಿಪಿಐಎಂ, ಜಿಲ್ಲಾ ಮುಸ್ಲಿಮ್ ಒಕ್ಕೂಟ, ದಸಂಸ ಅಂಬೇಡ್ಕರ್ ವಾದ, ಸಹಬಾಳ್ವೆ, ಕೃಷಿ ಕೂಲಿಕಾರರ ಸಂಘಗಳ ಸಹ ಯೋಗದೊಂದಿಗೆ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸ ಲಾಯಿತು.

ಈ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಬಿಜೆಪಿ ಸರಕಾರ ಬಹುರಾಷ್ಟ್ರೀಯ ಕಂಪೆನಿಗಳ ಪರವಾಗಿ ಇದೆಯೇ ಹೊರತು ರೈತರ, ಕಾರ್ಮಿಕರ ಪರವಾಗಿಲ್ಲ ಎಂಬುದು ಇದೀಗ ಅರ್ಥವಾಗು ತ್ತಿದೆ. ಸಣ್ಣ ರೈತರ ಭೂಮಿಗಳನ್ನು ಬಹುರಾಷ್ಟ್ರೀಯ ಕಂಪೆನಿಗಳ ಕೈಗೆ ಒಪ್ಪಿಸಿ ರೈತರನ್ನು ಕೂಲಿಗಳಾಗಿ ದುಡಿಸಿಕೊಳ್ಳಲಾಗುತ್ತದೆ. ಮುಂದೆ ಕೆಲಸ ಇಲ್ಲದೆ ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, ರೈತರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆ. ದೇಶದ ಬಹುತೇಕ ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರಕಾರ, ಇದೀಗ ಕೃಷಿ ಕ್ಷೇತ್ರವನ್ನು ಕೂಡ ಖಾಸಗಿಯವರಿಗೆ ಒಪ್ಪಿಸಲು ಹೊರಟಿದೆ ಎಂದು ಟೀಕಿಸಿದರು.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಮಾತ ನಾಡಿ, ಈ ದೇಶದ ಜನರಿಗೆ ಅನ್ನ ಕೊಡುವ ಕೆಲಸ ಮಾಡುವ ರೈತರೇ ನಿಜವಾದ ದೇಶಪ್ರೇಮಿ. ಅಂತಹ ರೈತರ ಭೂಮಿಯನ್ನು ಕಿತ್ತುಕೊಂಡು ತಮ್ಮ ಆಪ್ತರಾದ ಕಾರ್ಪೊರೇಟ್ ಕಂಪೆನಿಗಳ ವಶಕ್ಕೆ ಒಪ್ಪಿಸಿ, ರೈತ ರನ್ನು ಕಾರ್ಪೊರೇಟ್ ಕಂಪೆನಿ ಗಳ ಗುಲಾಮರನ್ನಾಗಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಿಸಾನ್ ಕಾಂಗ್ರೆಸ್‌ನ ಶಶಿಧರ್ ಶೆಟ್ಟಿ ಎರ್ಮಾಳ್, ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಶೇರಿಗಾರ್, ಸಿಐಟಿಯು ಮುಖಂಡ ವಿಶ್ವನಾಥ್ ರೈ ಮಾತನಾಡಿದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಡ ಶ್ಯಾಮ್‌ರಾಜ್ ಬಿರ್ತಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ವೆಲ್‌ಫೇರ್ ಪಾರ್ಟಿಯ ಅಬ್ದುಲ್ ಅಝೀಝ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ, ಹುಸೇನ್ ಕೋಡಿಬೆಂಗ್ರೆ, ಸಲಾವುದ್ದೀನ್ ಅಬ್ದುಲ್ಲಾ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್, ಪ್ರಶಾಂತ್ ಜತ್ತನ್ನ, ಇದ್ರೀಸ್ ಹೂಡೆ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿಯಲ್ಲಿ ತಟ್ಟದ ಬಂದ್ ಬಿಸಿ !

ಭಾರತ್ ಬಂದ್‌ಗೆ ಉಡುಪಿ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೂ ಎಲ್ಲೂ ಯಾವುದೇ ರೀತಿ ಬಂದ್ ನಡೆಯಲಿಲ್ಲ. ಅಂಗಡಿ ಮುಗ್ಗಟ್ಟುಗಳು, ಖಾಸಗಿ, ಸಕರಾರಿ ಬಸ್‌ಗಳ ಸಂಚಾರ ಎಂದಿನಂತೆ ಇದ್ದವು. ಜನ ಹಾಗೂ ವಾಹನ ಸಂಚಾರ ಎಲ್ಲ ಕಡೆ ಸಾಮಾನ್ಯ ವಾಗಿ ಕಂಡು ಬಂತು. ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಬ್ರಹ್ಮಾವರ, ಕಾಪು ಗಳಲ್ಲಿಯೂ ಬಂದ್‌ಗೆ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News