ವರ್ತೂರು ಪ್ರಕಾಶ್ ಗೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ
Update: 2020-12-08 22:45 IST
ಬೆಂಗಳೂರು, ಡಿ.7: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ನನ್ನನ್ನು ಭೇಟಿ ಮಾಡಿಲ್ಲ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಯಾವುದೇ ಆಲೋಚನೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ವರ್ತೂರು ಪ್ರಕಾಶ್ ಅವರು ಈ ಕ್ಷಣದವರೆಗೂ ನನ್ನನ್ನು ಭೇಟಿ ಮಾಡಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದು, ನಮ್ಮ ಪಕ್ಷದ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ವರ್ತೂರು ಪ್ರಕಾಶ್ ಅವರು ಮುಂದಿನ ದಿನಗಳಲ್ಲಿ ಇದೇ ರೀತಿಯ ಕುತಂತ್ರ, ಅಪಪ್ರಚಾರ ಮುಂದುವರಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.