×
Ad

ನೇಣು ಬಿಗಿದುಕೊಂಡು ಅಕ್ಕ- ತಂಗಿ ಆತ್ಮಹತ್ಯೆ

Update: 2020-12-08 23:26 IST

ಕಲಬುರಗಿ: ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಅಕ್ಕ ತಂಗಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ಐಶ್ವರ್ಯ ಸುತಾರ (20) ಹಾಗೂ ಸಾರಿಕಾ ಸುತಾರ (17) ಆತ್ಮಹತ್ಯೆಗೆ ಶರಣಾದ ಸಹೋದರಿಯರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಆತ್ಮಹತ್ಯೆಗೆ ಶರಣಾದ ಯುವತಿಯರ ತಂದೆ ಐನಾಪುರ ಗ್ರಾಮದಲ್ಲಿ ಪೆಟ್ಟಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದು, ಐವರು ಮಕ್ಕಳಲ್ಲಿ, ಮೂವರ ಮದುವೆಯಾಗಿದೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಶರಣಾದ ಸಾರಿಕಾಗೆ ತಿಂಗಳ ಹಿಂದಷ್ಟೆ ಮದುವೆ ನಿಶ್ಚಯವಾಗಿತ್ತು. ನಾಲ್ಕನೆಯವಳಾದ ಐಶ್ವರ್ಯಗೆ ಗಂಡು ಹುಡುಕಲಾಗುತಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.

ಸಂಜೆ ತಾಯಿ ಹೊಲದಿಂದ ಮನೆಗೆ ಬಂದಾಗ ಇಬ್ಬರು ಯುವತಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪಿಎಸ್ಐ ರಾಜಶೇಖರ ರಾಠೋಡ ಭೇಟಿ‌ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News