×
Ad

ಬಾವಿಗೆ ಬಿದ್ದ ಕಾರು: ಆರು ಮಂದಿ ಮೃತ್ಯು

Update: 2020-12-09 11:29 IST

ಭೋಪಾಲ್: ಚಲಿಸುತ್ತಿದ್ದ ವಾಹನವೊಂದು ಬಾವಿ ಒಳಗೆ ಬಿದ್ದ ಪರಿಣಾಮ ಆರು ಜನರು ಜೀವ ಕಳೆದುಕೊಂಡಿರುವ ಘಟನೆ ಮಧ್ಯಪ್ರದೇಶದ ಚತ್ತಾರ್ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆ ಸಮಾರಂಭಕ್ಕೆ ತೆರಳಿದ್ದ 9 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಆರು ಜನರು ಮೃತಪಟ್ಟಿದ್ದರೆ, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News