×
Ad

ಹಾಲಾಡಿ ಸೇತುವೆಗೆ ಕಾರು ಢಿಕ್ಕಿ: ಕೆಎಂಎಫ್ ನಿರ್ದೇಶಕ ರಾಜೀವ ಶೆಟ್ಟಿ ಮೃತ್ಯು

Update: 2020-12-09 15:54 IST

ಕುಂದಾಪುರ, ಡಿ.9: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕರೊಬ್ಬರು ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ವೇಳೆ ಹಾಲಾಡಿಯಲ್ಲಿ ನಡೆದಿದೆ.

ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟವರಾಗಿದ್ದಾರೆ.

ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News