×
Ad

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Update: 2020-12-09 18:00 IST

ಉಡುಪಿ, ಡಿ.9: ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ ಮತ್ತು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಸಂಗಕರ್ತ ಗಣೇಶ್ ಕೊಲೆಕಾಡಿ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.

ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ವಹಿಸಿದ್ದರು. ಯಕ್ಷಗಾನ ಕಲಾವಿದ ತಾರಾನಾಥ ವರ್ಕಾಡಿ ಅಭಿನಂದನಾ ಭಾಷಣ ಮಾಡಿದರು.

ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ವಿ.ಜಿ.ಶೆಟ್ಟಿ, ಬಾರಕೂರು ಶ್ರೀಕಾಳಿಕಾಂಬಾ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಯೋಗೀಶ್‌ ಆಚಾರ್ಯ ಅಲೆವೂರು, ಮುದ್ರಾಡಿ ವಿಜಯ್ ಕುಮಾರ್, ಸಾಫಲ್ಯ ಟ್ರಸ್ಟ್ ಪ್ರವರ್ತಕಿ ನಿರುಪಮಾ ಪ್ರಸಾದ್ ಶೆಟ್ಟಿ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಯಕ್ಷ ಆರಾಧನಾ ಕಿದಿಯೂರು ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಕೆ.ಜೆ.ಗಣೇಶ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಟ್ರಸ್ಟಿಗಳಾದ ಕೆ.ಜೆ.ಕೃಷ್ಣ ಹಾಗು ಕೆ.ಜೆ. ಸುಧೀಂದ್ರ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ನೃತ್ಯ ರೂಪಕ ‘ನರಕ ಚತುರ್ದಶಿ’ ಪ್ರದರ್ಶನಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News