ಪ್ರಚೋದನಕಾರಿ ಗೋಡೆ ಬರಹ ಪ್ರಕರಣ: ಬಂಧಿತ ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ
Update: 2020-12-09 21:01 IST
ಮಂಗಳೂರು : ನಗರದಲ್ಲಿ ಪ್ರಚೋದನಕಾರಿ ಗೋಡೆಬರಹ ಪ್ರಕರಣದಲ್ಲಿ ಬಂಧಿತರಾದ ಇಬ್ಬರು ಆರೋಪಿಗಳನ್ನು ಪೊಲೀಸರು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಆರೋಪಿಗಳಾದ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರೀಕ್ (22) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿ ಸಾದತ್ ಎಂಬಾತನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.