ಅಂಗನವಾಡಿ ಕಾರ್ಯಕರ್ತರನ್ನು ಸರಕಾರಿ ನೌಕರರೆಂದು ಪರಿಗಣಿಸಲು ಅವಕಾಶವಿಲ್ಲ: ಸಚಿವೆ ಶಶಿಕಲಾ ಜೊಲ್ಲೆ

Update: 2020-12-09 17:25 GMT

ಬೆಂಗಳೂರು, ಡಿ. 9: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗೌರವಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದು ಕೇಂದ್ರ ಸರಕಾರದ ಮಾರ್ಗಸೂಚಿಯಡಿ ಅವರನ್ನು ಸರಕಾರಿ ನೌಕರರೆಂದು ಪರಿಗಣಿಸಲು ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಹರೀಶ್ ಪೂಂಜ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಹಿಂದೆ 2015ರವರೆಗೆ ನೋಂದಾಯಿಸಲಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನ್ಯಾಷನಲ್ ಪೆನ್ಷನ್ ಸಿಸ್ಟಮ್-ಲೈಟ್ ಅಡಿಯಲ್ಲಿ ಪಿಂಚಣಿ ನೀಡಲಾಗುತ್ತಿದೆ.

2015ರ ನಂತರ ನೇಮಕ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೂ 50 ಸಾವಿರ ರೂ. ಹಾಗೂ 30 ಸಾವಿರ ರೂ.ಗಳ ಇಡಿಗಂಟು ನೀಡಲು ಚರ್ಚಿಸಿ ತೀರ್ಮಾನಿಸಲಾಗುವುದು. ಆದರೆ, ಅವರ ಕುಟುಂಬದ ಸದಸ್ಯರಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News