×
Ad

ರೈತರ ಹೋರಾಟಕ್ಕೆ ಬೆಂಬಲ: ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರಿಂದ ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆ

Update: 2020-12-10 14:12 IST

ಬೆಂಗಳೂರು, ಡಿ.10: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಫ್ರೀಡಂ ಪಾರ್ಕ್‌ ನಲ್ಲಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಭಾಗವಹಿಸಲು ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆಯಲ್ಲಿ ತೆರಳಿದರು.

ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ತುರ್ತು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಫ್ರೀಡಂ ಪಾರ್ಕ್‌ಗೆ ತೆರಳಿದರು.

 ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಕಾನೂನು ತಜ್ಞರಿಂದ ಸಲಹೆ ಪಡೆದ ಬಳಿಕ ಚುನಾವಣಾ ಆಯೋಗದ ಕದ ತಟ್ಟಲು ಕೂಡಾ ಶಾಸಕಾಂಗ ಪಕ್ಷದ ಸಭೆ ತೀರ್ಮಾನಿಸಲಾಗಿದೆ ಎಂದೂ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News