×
Ad

ಅನುಭವ ಮಂಟಪ ಪ್ರಜಾಪ್ರಭುತ್ವಕ್ಕೆ ಪ್ರತಿರೂಪವಾಗಿತ್ತು: ನರೇಂದ್ರ ಮೋದಿ

Update: 2020-12-10 15:10 IST

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನೂತನ ಸಂಸತ್ ಭವನದ ಕಟ್ಟಡಕ್ಕೆ ಶಿಲಾನ್ಯಾಸ ನರೆವೇರಿಸಿದರು.

ಬಳಿಕ ಭಾಷಣ ಮಾಡಿದ ಅವರು ಬಸವಣ್ಣನವರ ಅನುಭವಮಂಟಪದ ಮಹತ್ವದ ಕುರಿತು ಬಣ್ಣಿಸಿದರು. 12ನೇ ಶತಮಾನದಲ್ಲೇ ಪ್ರಜಾಪ್ರಭುತ್ವದ ಕಲ್ಪನೆ ಇತ್ತು. ಆಗ ಅನುಭವ ಮಂಟಪ ಅಸ್ತಿತ್ವದಲ್ಲಿತ್ತು. ಅನುಭವ ಮಂಟಪ ಪ್ರಜಾಪ್ರಭುತ್ವಕ್ಕೆ ಪ್ರತಿರೂಪವಾಗಿತ್ತು. ಬಸವಣ್ಣನವರ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ . ಸಂಸತ್ ಭವನ ಪ್ರಜಾಪ್ರಭುತ್ವದ ಪ್ರತೀಕವಾಗಿದೆ ಎಂದರು.

ದಿಲ್ಲಿಯಲ್ಲಿ 971 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ನಾನಾ ರಾಜಕೀಯ ಪಕ್ಷಗಳ ನಾಯಕರು, ಸಚಿವರು, ವಿವಿಧ ದೇಶಗಳ ರಾಯಭಾರಿಗಳು, ರತನ್ ಟಾಟಾ ಸಹಿತ ಅನೇಕ ಗಣ್ಯರು ಈಸಮಾರಂಭಕ್ಕೆ ಸಾಕ್ಷಿಯಾದರು.

ಕರ್ನಾಟಕದ ಶೃಂಗೇರಿ ಮಠದ ಪುರೋಹಿತರ ನೇತೃತ್ವದಲ್ಲಿ ಸಂಸತ್ ಭವನದ ಭೂಮಿಪೂಜೆ ನೆರವೇರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News