ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಸಾರ್ಟಿಸಿ

Update: 2020-12-10 13:59 GMT

ಬೆಂಗಳೂರು, ಡಿ.10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳ ಬಸ್ ಪಾಸ್‍ಗಳ ಅವಧಿಯನ್ನು ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳು 2020ರ ಡಿ.31ರ ತನಕ ಉಚಿತವಾಗಿ ಬಸ್‍ಗಳಲ್ಲಿ ಪ್ರಯಾಣಿಸಬಹುದಾಗಿದೆ. 

ಶೈಕ್ಷಣಿಕ ಚಟುವಟಿಕೆಗಳನ್ನು ನ.17ರಿಂದ ಪ್ರಾರಂಭಿಸುವ ಬಗ್ಗೆ ಸರಕಾರ ಸೂಚನೆ ನೀಡಿದ್ದರಿಂದ ವಿದ್ಯಾರ್ಥಿಗಳಿಗೆ 2019-20ನೆ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಡಿ.10ರವರೆಗೆ ಅವಕಾಶ ಕಲ್ಪಿಸಲಾಗಿತ್ತು.   

ಮತ್ತೆ ವಿದ್ಯಾರ್ಥಿಗಳ ಬಸ್ ಪಾಸ್‍ಗಳ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಿರುವ ರಾಜ್ಯ ರಸ್ತೆ ಸಾರಿಗೆ ನಿಗಮವು ಬಸ್‍ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಬೋಧನ ರಶೀದಿ ಶುಲ್ಕವನ್ನು ತೋರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News