ಡಿ.12-13 ರಂದು ಮೆಟ್ರೋ ರೈಲು ಸೇವೆಗಳ ಸ್ಥಗಿತ
Update: 2020-12-10 20:49 IST
ಬೆಂಗಳೂರು, ಡಿ.10: ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ವಿಸ್ತರಿಸಿದ ಮಾರ್ಗಕ್ಕೆ ವಿದ್ಯುತ್ ಕೇಬಲ್ ಅಳವಡಿಕೆ ಕಾರ್ಯ ನಡೆಯುತ್ತಿರುವುದರಿಂದ ಡಿ.12 ಮತ್ತು 13 ರಂದು ಮೈಸೂರು ರಸ್ತೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಸೇವೆಗಳು ಲಭ್ಯವಿರುತ್ತವೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲದೇ ಎಂದಿನಂತೆ ರೈಲುಗಳು ಕಾರ್ಯನಿರ್ವಹಿಸುತ್ತವೆ ಎಂದು ಪ್ರಕಟನೆ ತಿಳಿಸಿದೆ.