×
Ad

ಬಿಬಿಎಂಪಿ ಮೇಯರ್ ಅಧಿಕಾರಾವಧಿ 5ವರ್ಷ ಇರಲಿ: ಬಿ.ಕೆ.ಹರಿಪ್ರಸಾದ್

Update: 2020-12-10 21:30 IST

ಬೆಂಗಳೂರು, ಡಿ.10: ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕದಲ್ಲಿ ಮೇಯರ್ ಅಧಿಕಾರಾವಧಿಯನ್ನು ಒಂದು ವರ್ಷದಿಂದ 30 ತಿಂಗಳಿಗೆ ಏರಿಕೆ ಮಾಡಲಾಗಿದೆ. ಅದನ್ನು ಐದು ವರ್ಷಕ್ಕೆ ಹೆಚ್ಚಳ ಮಾಡುವುದು ಒಳ್ಳೆಯದು ಎಂದು ಕಾಂಗ್ರೆಸ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಸಲಹೆ ನೀಡಿದ್ದಾರೆ.

ವಿಧಾನಪರಿಷತ್‍ನಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ-2020ರ ಕುರಿತು ಚರ್ಚೆಯ ವೇಳೆ ಮಾತನಾಡಿದ ಅವರು, ಮೇಯರ್ ಅವಧಿ ಒಂದು ವರ್ಷ ಇರುವುದರಿಂದ ಯಾವುದೇ ಕಾರ್ಯಕ್ರಮಗಳ ಆಯೋಜನೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಅದನ್ನು 30 ತಿಂಗಳು ಹೆಚ್ಚಳ ಮಾಡಿರುವುದು ಒಳ್ಳೆಯ ವಿಚಾರ. ಅದನ್ನು 5ವರ್ಷಕ್ಕೆ ಹೆಚ್ಚಳ ಮಾಡಿದರೆ ಮತ್ತಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಿಬಿಎಂಪಿ ಕಾಯ್ದೆಯ ತಿದ್ದುಪಡಿಯಲ್ಲಿ ಈಗಿರುವ 198ವಾರ್ಡ್‍ಗಳಿಂದ 243ವಾರ್ಡ್‍ಗಳಿಗೆ ಹೆಚ್ಚಳ ಮಾಡುವ ಪ್ರಸ್ತಾಪ ಮಾಡಲಾಗಿದೆ. ಆದರೆ, 198ವಾರ್ಡ್‍ಗಳಿಗೆ ಹೊಸದಾಗಿ ಸೇರ್ಪಡೆಗೊಂಡ 110ಹಳ್ಳಿಗಳಲ್ಲಿ ಇನ್ನೂ ಮೂಲಭೂತ ಸೌಕರ್ಯಗಳ ಸಮಸ್ಯೆ ತಾಂಡವವಾಡುತ್ತಿದೆ. ಮೊದಲು ಇದನ್ನು ಸರಿಪಡಿಸುವ ಕಡೆಗೆ ಹೆಚ್ಚಿನ ಆದ್ಯತೆ ಇರಲಿ ಎಂದು ಅವರು ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಸ್ತಾರ ಹೆಚ್ಚುತ್ತಲೇ ಹೋಗುತ್ತಿದೆ. ಹೀಗಾಗಿ ಆಡಳಿತದ ಹಿತದೃಷ್ಟಿಯಿಂದ ಪಾಲಿಕೆಯನ್ನು ಎರಡಾಗಿ ವಿಭಾಗಿಸಿದರೆ ಉತ್ತಮ. ಇದರಿಂದ ಆಡಳಿತ ಜನತೆಯ ಕೈಗೆಟುಕಲಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News