ಎಪಿಎಂಸಿ ತಿದ್ದುಪಡಿ ಮಸೂದೆ ವಾಪಸ್ ಪಡೆಯಲು ಸಿಪಿಐಎಂ ಆಗ್ರಹ

Update: 2020-12-10 16:34 GMT

ಬೆಂಗಳೂರು, ಡಿ.10: ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ಎಪಿಎಂಸಿ ತಿದ್ದುಪಡಿ ಮಸೂದೆ-2020 ಹಾಗೂ ಗೋಹತ್ಯೆ ನಿಷೇಧ ಮಸೂದೆ-2020ಯನ್ನು ವಾಪಾಸು ಪಡೆಯುವಂತೆ ಸಿಪಿಐಎಂ ಒತ್ತಾಯಿಸಿದೆ.

ಡಾ.ಎಂ.ಎಸ್.ಸ್ವಾಮಿನಾಥನ್ ಕೃಷಿ ಆಯೋಗದ ಸಲಹೆಯಂತೆ, ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖಾತರಿ ಕಾಯ್ದೆಯನ್ನು ಅಂಗೀಕರಿಸಲು ಒತ್ತಾಯಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರಕಾರ ಕಾರ್ಪೊರೇಟ್ ಸಂಸ್ಥೆಗಳ ಅನುಕೂಲಕ್ಕಾಗಿ ಎಪಿಎಂಸಿ ತಿದ್ದುಪಡಿ ಮಸೂದೆ, ಗೋಹತ್ಯೆ ನಿಷೇಧ ಮಸೂದೆಯನ್ನು ಜಾರಿಗೆ ತರಲು ಹೋರಟಿದೆ. ಕೂಡಲೇ ಈ ಎರಡು ಮಸೂದೆಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದೆ.  

ಕೇಂದ್ರ ಸರಕಾರ ರೈತರು, ಅಲ್ಪಸಂಖ್ಯಾತರ, ದಲಿತರ ಹಾಗೂ ನಾಗರಿಕರ ವಿರುದ್ಧದ ಕಾನೂನುಗಳನ್ನು ಜಾರಿಗೆ ತರಲು ಹೋರಟಿದ್ದು, ಇದರಿಂದ, ದೇಶದಲ್ಲಿ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿವೆ ಎಂದು ಸಿಪಿಐಎಂ ಮುಖಂಡ ಯು.ಬಸವರಾಜ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News