×
Ad

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ನಾಮಕರಣ ಮಾಡಲು ಮನವಿ

Update: 2020-12-10 22:18 IST

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯರ ಹೆಸರು ನಾಮಕರಣ ಮಾಡಲು ಒತ್ತಾಯಿಸಿ, ವಿಧಾನಪರಿಷತ್ತಿನ ಸಭಾ ನಾಯಕರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ದಕ್ಷಿಣ ಕನ್ನಡ - ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಮಾಡಿತು.

ನಿಯೋಗದಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕರಾದ ಸುನೀಲ್ ಕುಮಾರ್ ಕಾರ್ಕಳ, ಶಾಸಕರುಗಳಾದ ರಾಜೇಶ್ ನಾಯ್ಕ್ ಬಂಟ್ವಾಳ, ರಘುಪತಿ ಭಟ್ ಉಡುಪಿ, ಉಮಾನಾಥ್ ಕೋಟ್ಯಾನ್ ಮೂಡುಬಿದಿರೆ, ಸಂಜೀವ  ಮಠಂದೂರ್ ಪುತ್ತೂರು, ಭರತ್ ಶೆಟ್ಟಿ ಮಂಗಳೂರು ಉತ್ತರ,  ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News