ಡಾ. ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ

Update: 2020-12-13 12:08 GMT

ಮುಲ್ಕಿ: ಖ್ಯಾತ ವಾಗ್ಮಿ, ಹಿರಿಯ ವಿದ್ವಾಂಸ ಪತ್ರಕರ್ತ ಡಾ. ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ.ಬನ್ನಂಜೆ ಗೋವಿಂದಾಚಾರ್ಯರು ತಮ್ಮ ಪ್ರವಚನಗಳ ಮೂಲಕ ಖ್ಯಾತ ವಾಗ್ಮಿಯಾಗಿ, ಉತ್ತಮ ಕವಿಯಾಗಿ, ಲೇಖಕನಾಗಿ ಸಮಾಜದ ಹಿತ ಚಿಂತಕರಾಗಿದ್ದರು. ಅವರ ಹಾಗೂ ತಮ್ಮ ಬಾಂಧವ್ಯವನ್ನು ಸ್ಮರಿಸಿ ಕೊಂಡಿರುವ ಸ್ವಾಮೀಜಿ, ಓರ್ವ ಅಜಾತಶತ್ರುವಾಗಿ ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.

ಡಾ.ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು,ಕ.ಸಾ.ಪ. ಮಾಜೀ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡು, ಧಾರ್ಮಿಕ ಪರಿಷತ್ ಸದಸ್ಯರಾದ ಭುವನಾಭಿರಾಮ ಉಡುಪ, ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ, ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರೋಶನಿ ಭಟ್, ರಾಹುಲ್ ಸಿ ಭಟ್, ಸಂಚಾಲಕ ಪುನೀತ ಕೃಷ್ಣ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು,ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಮುಲ್ಕಿ ಲಯನ್ಸ್ ಕ್ಲಬ್ ಮಾಜೀ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಉಪಾಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು,ತಾ. ಪಂ.ಸದಸ್ಯ ಶರತ್ ಕುಬೆವೂರು, ತೋಕೂರು ಫೇಮಸ್ ಯೂತ್  ಕ್ಲಬ್ ಅಧ್ಯಕ್ಷ ಭಾಸ್ಕರ ಅಮೀನ್, ಸಾಲುಮರದ ತಿಮ್ಮಕ್ಕ ಅಭಿಮಾನಿ ಸಂಘದ ಅಧ್ಯಕ್ಷ ವಾಲ್ಟರ್ ಡಿಸೋಜ ಪಕ್ಷಿಕೆರೆ, ಕಿಶೋರ್ ಶೆಟ್ಟಿ ಬಪ್ಪನಾಡು, ಉದಯಕುಮಾರ್ ಶೆಟ್ಟಿ (ಹೋಟೆಲ್ ಅಧಿಧನ್) ಮುಲ್ಕಿ, ಗೌತಮ್ ಜೈನ್ ಮೂಲ್ಕಿ ಅರಮನೆ, ಮಾಜೀ ಪಂ.ಸದಸ್ಯಜೀವನ್ ಶೆಟ್ಟಿ ಅಂಗರಗುಡ್ಡೆ, ಉದಯ ಅಮಿನ ಮಟ್ಟು ಸುದೀರ ಶೆಟ್ಟಿ ಅಂಗರಗುಡ್ಡೆ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News