ದ.ಕ. ಜಿಲ್ಲೆಯಲ್ಲಿ ಹೊಸದಾಗಿ 36 ಮಂದಿಗೆ ಕೊರೋನ ಪಾಸಿಟಿವ್

Update: 2020-12-13 15:03 GMT

ಮಂಗಳೂರು, ಡಿ.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 36 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 29 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 32,361ಕ್ಕೆ ಏರಿಕೆಯಾಗಿದೆ. ಈ ಪೈಕಿ 31,200 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ. 731 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 430 ಸಕ್ರಿಯ ಪ್ರಕರಣಗಳಿದ್ದು, ಬಹುತೇಕರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 16,830 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 17,87,197 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News