ಗ್ರಾ.ಪಂ. ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ತಡೆಗಟ್ಟಿ: ಜಿಲ್ಲಾಡಳಿತಗಳಿಗೆ ಚುನಾವಣಾ ಆಯೋಗ ಸೂಚನೆ

Update: 2020-12-13 15:25 GMT

ಬೆಂಗಳೂರು, ಡಿ. 13: ಅವಧಿ ಮುಗಿದಿರುವ 5,761 ಗ್ರಾಮ ಪಂಚಾಯತ್ ಗಳಿಗೆ ಡಿ.22 ಮತ್ತು 27ರಂದು ಎರಡು ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹಸ್ತಕ್ಷೇಪ ಮಾಡದಂತೆ ತಡೆಗಟ್ಟಲು ಹಾಗೂ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವಂತೆ ಎಲ್ಲ ಜಿಲ್ಲಾಡಳಿತಗಳಿಗೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು, ರಾಜಕೀಯದಿಂದ ಪಂಚಾಯತ್‍ಗಳನ್ನು ಮುಕ್ತಗೊಳಿಸಬೇಕು. ಇಂತಹ ಕಲುಷಿತ ವಾತಾವರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ರಾಜಕೀಯ ಪಕ್ಷಗಳು ವೇದಿಕೆಯ ಮೇಲೆ ಪಕ್ಷದ ಬಾವುಟ ಬಳಸುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್‍ಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಗ್ರಾಪಂ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News