ಗ್ರಾಪಂ ಚುನಾವಣೆಗೆ ಸಂಬಂಧಿಸಿ ಬಿಜೆಪಿಯಿಂದ ಆಡಳಿತ ಯಂತ್ರದ ದುರ್ಬಳಕೆ: ಹರೀಶ್ ಕುಮಾರ್

Update: 2020-12-14 10:21 GMT

ಮಂಗಳೂರು, ಡಿ.14: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರರೂಢ ಬಿಜೆಪಿಯಿಂದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕ್ರಿಯೆ ವ್ಯಾಪಕವಾಗಿ ನಡೆಯುತ್ತಿದೆ. ಈ ಬಗ್ಗೆ  ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಜಯ ಗಳಿಸಲು ಬಿಜೆಪಿ ವಾಮ ಮಾರ್ಗವನ್ನು ಅನುಸರಿಸುತ್ತಿದೆ. ಹಣದ ಆಮಿಷ, ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯಲು ಬೆದರಿಕೆ ಒಡ್ಡಲಾಗುತ್ತಿದೆ. ಕೆಲವು ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ವಾರ್ಡ್ ಗಳನ್ನು ವಿಂಗಡಿಸಲಾಗಿದೆ ಎಂದು ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ಟಿ. ಖಾದರ್, ಮಾಜಿ ಶಾಸಕ ಐವನ್ ಡಿಸೋಜ, ಕಾಂಗ್ರೆಸ್ ಪದಾಧಿಕಾರಿಗಳಾದ ವಿಶ್ವಾಸ್ ದಾಸ್, ಸದಾಶಿವ ಶೆಟ್ಟಿ, ಪ್ರಸಾದ್, ಶುಭೋದಯ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News