×
Ad

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿ ವಕೀಲನ ವಿರುದ್ಧ ಪ್ರಕರಣ

Update: 2020-12-14 18:08 IST

ಉಡುಪಿ, ಡಿ.14: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪದಡಿ ಉಡುಪಿಯ ವಕೀಲ ಸುಕುಮಾರ್ ಶೆಟ್ಟಿ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಾಡಿ ನಿವಾಸಿಯಾಗಿರುವ ಸುಕುಮಾರ್ ಶೆಟ್ಟಿ ಕೆಲವು ವರ್ಷಗಳಿಂದ 25ರ ಹರೆಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಮುಂದೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಹಲವು ಬಾರಿ ಒತ್ತಾಯ ಪೂರ್ವಕವಾಗಿ ದೈಹಿಕ ಸಂಪರ್ಕ ನಡೆಸಿದ್ದನು ಎಂದು ದೂರಲಾಗಿದೆ.

ಇದರಿಂದ ಆಕೆ ಗರ್ಭವತಿಯಾಗಿ ಅನಾರೋಗ್ಯಕ್ಕೆ ಒಳಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ನಂತರ ಯುವತಿ, ಆತನೊಂದಿಗೆ ಮದುವೆ ಆಗುವಂತೆ ಒತ್ತಾಯಿಸಿದಾಗ ಆತ, ಆಕೆಗೆ ಕೈಯಿಂದ ಹೊಡೆದು ಹಲ್ಲೆ ನಡೆಸಿ ಮದುವೆ ನಿರಾಕರಿಸಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವತಿ ನೀಡಿದ ದೂರಿನಂತೆ ಸುಕುಮಾರ್ ಶೆಟ್ಟಿ ವಿರುದ್ಧ ಮಹಿಳಾ ಠಾಣೆ ಯಲ್ಲಿ ಐಪಿಸಿ 376, 417, 323ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News