ಅನಧಿಕೃತ ಧಾರ್ಮಿಕ ಕಟ್ಟಡಗಳ ಕುರಿತ ಪ್ರಮಾಣ ಪತ್ರ ಸಲ್ಲಿಕೆ: ಬಿಬಿಎಂಪಿ ವಿರುದ್ಧ ಹೈಕೋರ್ಟ್ ಅಸಮಾಧಾನ

Update: 2020-12-14 16:14 GMT

ಬೆಂಗಳೂರು, ಡಿ.14: ರಾಜಧಾನಿಯ ಸಾರ್ವಜನಿಕ ಪ್ರದೇಶಗಳಲ್ಲಿ 106 ಮಾತ್ರ ಅನಧಿಕೃತ  ಧಾರ್ಮಿಕ ಕಟ್ಟಡಗಳು ಇವೇ ಎಂಬ ಬಿಬಿಎಂಪಿಯ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್ 2021ರ ಜ.14ರೊಳಗಾಗಿ ಉಳಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ಪ್ರಮಾಣ ಪತ್ರ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ರಾಜಧಾನಿಯಲ್ಲಿ 106 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನಿರ್ಮಾಣ ಮಾಡಿರುವ ಬಗ್ಗೆ ಬಿಬಿಎಂಪಿ ಸಲ್ಲಿಸಿರುವ ಪ್ರಮಾಣ ಪತ್ರವನ್ನು ಮಾನ್ಯ ಮಾಡಲು ನಿರಾಕರಿಸಿರುವ ನ್ಯಾಯಪೀಠವು ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ನಿರ್ಮಾಣ ಮಾಡಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರೆವುಗೊಳಿಸಬೇಕು. ಜೊತೆಗೆ ನಗರದಲ್ಲಿ ಎಷ್ಟು ಅನಧಿಕೃತ ಧಾರ್ಮಿಕ ಕಟ್ಟಡಗಳು ಇವೆ ಎಂಬ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಬಿಬಿಎಂಪಿಗೆ ಸೂಚನೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News