ಐಟಿಐ ಪಠ್ಯ ಕ್ರಮ ಬದಲಾಣೆಗೆ ತಜ್ಞರ ಸಮಿತಿ: ಡಿಸಿಎಂ ಅಶ್ವತ್ಥನಾರಾಯಣ

Update: 2020-12-14 16:36 GMT

ಬೆಂಗಳೂರು, ಡಿ.14: ಐಟಿಐ ಕೋರ್ಸ್ ಗಳ ಪಠ್ಯಕ್ರಮವನ್ನು ಪೂರ್ಣ ಪ್ರಮಾಣದಲ್ಲಿ ಬದಲಾವಣೆ ಮಾಡಲು ಶಿಕ್ಷಣ ತಜ್ಞರು ಮತ್ತು ಉದ್ಯಮದ ಪ್ರತಿನಿಧಿಗಳ ಸಮಿತಿ ರಚಿಸುವಂತೆ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಐಟಿಐನಲ್ಲಿ ಒಟ್ಟು 53 ಟ್ರೇಡ್‍ಗಳು ಇದ್ದು ಬಹುತೇಕ ಕೋರ್ಸ್‍ಗಳಿಗೆ ಬೇಡಿಕೆಯೇ ಇಲ್ಲ. ಹೀಗಾಗಿ ಐಟಿಐ ಮಾಡಿದವರಿಗೆ ಉದ್ಯೋಗ ಕೂಡ ಸಿಗುತ್ತಿಲ್ಲ. ಈ ಕಾರಣಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಒಟ್ಟು 53ರಲ್ಲಿ 43 ಕೋರ್ಸ್‍ಗಳಿಗೆ ಕಳೆದ ವರ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಅಂತಹ ಅನುಪಯುಕ್ತ ಕೋರ್ಸುಗಳನ್ನು ರದ್ದು ಮಾಡಿ ಉದ್ಯೋಗಾದಾರಿತ ಕೋರ್ಸ್‍ಗಳನ್ನು ಆರಂಭಿಸುವುದು ಸೂಕ್ತ. ಈ ಕಾರಣಕ್ಕೆ ಪಠ್ಯಕ್ರಮ ಬದಲಿಸಲು ತಜ್ಞರ ಸಮಿತಿ ರಚಿಸುವುದಾಗಿ ಅವರು ತಿಳಿಸಿದರು.

ಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮತ್ತು ತರಬೇತಿ ಆಯುಕ್ತ ತ್ರಿಲೋಕ ಚಂದ್ರ, ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News