×
Ad

2022ರ ಉತ್ತರಪ್ರದೇಶ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಫರ್ಧಿಸಲಿದೆ: ಕೇಜ್ರಿವಾಲ್

Update: 2020-12-15 13:30 IST

ದೆಹಲಿ,ಡಿ.15: 2022ರಲ್ಲಿ ಉತ್ತರಪ್ರದೇಶದಲ್ಲಿ ನಡೆಯಲಿರುವ ಚುನಾವಣೆಗೆ ಆಮ್ ಆದ್ಮಿ ಪಕ್ಷವು ಸ್ಫರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಸದ್ಯ ದೆಹಲಿಯಲ್ಲಿರುವಂತೆಯೇ ಉತ್ತಮ ಮತ್ತು ಭ್ರಷ್ಟಾಚಾರ ರಹಿತ ಆಡಳಿತವನ್ನು ನಮ್ಮ ನೆರೆಯ ರಾಜ್ಯದಲ್ಲೂ ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಅವರು ತಿಳಿಸಿದರು.

“ಎಂಟು ವರ್ಷಗಳ ಅವಧಿಯಲ್ಲಿ ಒಟ್ಟು ಮೂರು ಬಾರಿ ನಮ್ಮ ಪಕ್ಷ ದೆಹಲಿಯಲ್ಲಿ ಅಧಿಕಾರಕ್ಕೇರಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿಪಕ್ಷವು ಪ್ರಬಲ ವಿರೋಧ ಪಕ್ಷವಾಗಿ ಮೂಡಿ ಬಂದಿದೆ. ಮುಂದೆ ಉತ್ತರಪ್ರದೇಶದಲ್ಲಿ 2022ರಲ್ಲಿ ನಡೆಯಲಿರುವ ಚುನಾವಣೆಯಲ್ಲಿಯೂ ನಾವು ಸ್ಪರ್ಧಿಸಲಿದ್ದೇವೆ” ಎಂದು ಘೋಷಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ಸದ್ಯ ಉತ್ತರಪ್ರದೇಶದ ಜನರು ಉತ್ತಮ ಮೂಲಭೂತ ಸೌಕರ್ಯಕ್ಕಾಗಿ ದೆಹಲಿಗೆ ಬರುವಂತಹ ಪರಿಸ್ಥಿತಿ ಇದೆ. ದೇಶದಲ್ಲೇ ಅತೀದೊಡ್ಡ ರಾಜ್ಯವಾಗಿರುವ ಉತ್ತರಪ್ರದೇಶವು ಉತ್ತಮ ಅಭಿವೃದ್ಧಿ ಹೊಂದಿರುವ ರಾಜ್ಯವಾಗಿ ಮಾರ್ಪಾಡುಗೊಳ್ಳಲು ಸಾಧ್ಯವಿಲ್ಲವೇ?” ಎಂದು ಆದಿತ್ಯನಾಥ್ ಸರಕಾರವನ್ನು ಕುಟುಕಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News