×
Ad

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಮಂತ್ರಿ ಬೊರಿಸ್ ಜಾನ್ಸನ್ ಮುಖ್ಯ ಅತಿಥಿ

Update: 2020-12-15 14:55 IST

ಹೊಸದಿಲ್ಲಿ: ಬ್ರಿಟನ್ ಪ್ರಧಾನಮಂತ್ರಿ ಬೊರಿಸ್ ಜಾನ್ಸನ್ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕೆಂಬ ಭಾರತದ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಬ್ರಿಟನ್‌ನ ವಿದೇಶಿ ಕಾರ್ಯದರ್ಶಿ ಹೇಳಿದ್ದಾರೆ.

ಜಾನ್ಸನ್ ಗಣರಾಜ್ಯೋತ್ಸವದಲ್ಲಿ ಭಾಗವಹಿಸುತ್ತಿರುವ ಬ್ರಿಟನ್‌ನ ಎರಡನೇ ಪ್ರಧಾನಮಂತ್ರಿಯಾಗಲಿದ್ದಾರೆ. 1993ರಲ್ಲಿ ಜಾನ್ ಮೇಜರ್ ಭಾರತದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಜಾನ್ಸನ್ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ರಾಯ್ಟರ್ಸ್ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News