ಪರಿಷತ್ ನಲ್ಲಿ ಗದ್ದಲ, ಕೋಲಾಹಲ: ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ- ಜೆಡಿಎಸ್
Update: 2020-12-15 15:15 IST
ಬೆಂಗಳೂರು: ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಕಾನೂನು ಬಾಹಿರವಾಗಿ ಅಧಿವೇಶನ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಮೇಲ್ಮನೆಯ ಘನತೆಗೆ ಚ್ಯುತಿಯುಂಟು ಮಾಡಿದ್ದಾರೆ. ಹೀಗಾಗಿ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕೋರಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ದೂರು ನೀಡಿದ್ದಾರೆ.
ನಿಯೋಗವು ಕಾಂಗ್ರೆಸ್ ವಿರುದ್ಧ ದೂರು ಸಲ್ಲಿಸಿದ್ದು, ಸಭಾಪತಿ ಪೀಠದಲ್ಲಿ ಕುಳಿತಿದ್ದ ಚಂದ್ರಶೇಖರ ಪಾಟೀಲ್ ವಿರುದ್ಧವೂ ದೂರು ನೀಡಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಬಿಜೆಪಿಯು ಮುಖ್ಯಮಂತ್ರಿ ನೇತೃತ್ವದಲ್ಲಿ ಹಿರಿಯ ಸಚಿವರ ಸಭೆ ನಡೆಸಿತ್ತು. ಸಭೆಯಲ್ಲಿ ರಾಜ್ಯಪಾಲರಿಗೆ ದೂರು ನೀಡುವ ಬಗ್ಗೆ ನಿರ್ಧಾರ ತೆಗೆದುಕೊಂಡ ಬಳಿಕ ಜೆಡಿಎಸ್ ಸದಸ್ಯರ ಜೊತೆಗೆ ರಾಜಭವನಕ್ಕೆ ತೆರಳಿ ದೂರು ಸಲ್ಲಿಸಿತು.