×
Ad

​ಒಳಚರಂಡಿ ಕಾರ್ಮಿಕರ ಪ್ರತಿಭಟನೆ 2ನೆ ದಿನವೂ ಮುಂದುವರಿಕೆ

Update: 2020-12-15 17:43 IST

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಆರಂಭಿಸಿದ್ದ ಪ್ರತಿಭಟನೆ ಮಂಗಳವಾರವೂ ಮುಂದುವರಿಯಿತು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ನೇತೃತ್ವದಲ್ಲಿ ಇಂದು ಕುದ್ರೋಳಿ ಪಂಪ್‌ಹ್‌ನಲ್ಲಿ ಕಾರ್ಮಿಕರು ಪ್ರತಿಭಟನೆ ಮುಂದುವರಿಸಿದರು.
ಸಮಿತಿ ಜಿಲ್ಲಾ ಸಂಚಾಲಕ ಜಗದೀಶ್ ಪಾಂಡೇಶ್ವರ, ವರ್ಕರ್ಸ್ ಯೂನಿಯನ್ ಅಧ್ಯಕ್ಷ ನವೀನ್ ಕೊಡಿಯಾಲ್‌ಗುತ್ತು, ಪ್ರಮುಖರಾದ ಪದ್ಮನಾಭ ವಾಮಂಜೂರು, ಸಂತೋಷ್ ಎಡಪದವು, ರಾಜೇಶ್ ಪೆರ್ನಾಜೆ, ರವೀಂದ್ರ ಕಟೀಲ್, ಗಜೇಂದ್ರ, ಹನೀಫ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News