×
Ad

ಯಕ್ಷ ವಿದ್ವಾಂಸ ಗಣೇಶ ಕೊಲೆಕಾಡಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ

Update: 2020-12-15 17:54 IST

ಉಡುಪಿ, ಡಿ.15: ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿಗೆ ಈ ಬಾರಿ ಪ್ರಸಂಗಕರ್ತ, ಛಾಂದಸ, ಕಲಾವಿದ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ ಎಂದು ಯಕ್ಷಗಾನ ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಡಿ.25ರ ಸಂಜೆ 5 ಗಂಟೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿಯು 40,000ರೂ. ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News