ಕೊಕೇನ್ ಮಾರಾಟ ಆರೋಪ: ವಿದೇಶಿ ಪ್ರಜೆ ಸೆರೆ
Update: 2020-12-15 18:28 IST
ಬೆಂಗಳೂರು, ಡಿ.15: ಮಾದಕ ವಸ್ತು ಕೊಕೇನ್ ಸರಬರಾಜು ಮಾಡುತ್ತಿದ್ದ ಆರೋಪದಡಿ ವಿದೇಶಿ ಪ್ರಜೆಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೈಜೀರಿಯಾ ಮೂಲದ ಚಿಡಿಬೇರ್ ಅಂಬ್ರೋಸ್ ಎಂಬಾತ ಬಂಧಿತ ಆರೋಪಿ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಬಂಧಿತ ವಿದೇಶಿ ಪೆಡ್ಲರ್ಸ್ ಗೆ ಕೊಕೇನ್ ಸರಬರಾಜು ಮಾಡುವ ಮೂಲಕ ಸಂಪರ್ಕದಲ್ಲಿದ್ದ. ಅಲ್ಲದೇ ಈತ ಡ್ರಗ್ಸ್ ಪ್ರಕರಣಗಳಲ್ಲೂ ಭಾಗಿಯಾಗಿದ್ದು, ಈತನ ಕುರಿತು ಸಂಪೂರ್ಣ ಮಾಹಿತಿ ಪಡೆದು ಬಂಧಿಸಲಾಗಿದೆ.
ರೋಪಿಯು ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಮಾದಕವಸ್ತು ಕೊಕೇನ್ ಸರಬರಾಜು ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.