ವಿಕಲಚೇತನರ ಸಬಲೀಕರಣದ ಕುರಿತು ಮಾಹಿತಿ ಕಾರ್ಯಕ್ರಮ
ಕಾರ್ಕಳ, ಡಿ.15: ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ನ್ಯಾಯವಾದಿಗಳ ಸಂಘ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಕುಕ್ಕುಂದೂರು ವಿಜೇತ ವಿಶೇಷ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ವಿಕಲ ಚೇತನರ ದಿನಾಚಾರಣೆ ಅಂಗವಾಗಿ ವಿಕಲ ಚೇತನರ ಸಬಲೀಕರಣದ ಕುರಿತು ಮಾಹಿತಿ ಕಾರ್ಯಕ್ರಮವನ್ನು ವಿಜೇತ ವಿಶೇಷ ಶಾಲೆಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕಾರ್ಕಳ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಿಜೇತ ವಿಶೇಷ ಶಾಲೆಯ ಸಂಸಾ್ಥಪಕಿ ಡಾ.ಕಾಂತಿ ಹರೀಶ್ ವಹಿಸಿದ್ದರು.
ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಕೆ.ಕೃಷ್ಣ ಶೆಟ್ಟಿ ಮುಖ್ಯ ಅತಿಥಿಯಾಗಿ ದ್ದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರತ್ನಾ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ದೀಕ್ಷಾ ವಿಕಲಚೇತನರ ಸಬಲೀಕರಣದ ಕುರಿತು ಮಾಹಿತಿ ನೀಡಿದರು. ಶ್ರೀದುರ್ಗಾ ವಿದ್ಯಾ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಶೆಟ್ಟಿ, ಶ್ರೀಗುರು ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ಸಿಯಾ ಸಂತೋಷ್ ನಾಯಕ್, ಟ್ರಸ್ಟಿ ಕಿರಣ್ ಶೆಟ್ಟಿ ಉಪಸ್ಥಿತರಿದ್ದರು.