ದ.ಕ. ಜಿಲ್ಲೆ ಗ್ರಾ.ಪಂ. ಚುನಾವಣೆ: 1,824 ನಾಮಪತ್ರ ಸಲ್ಲಿಕೆ
Update: 2020-12-15 23:31 IST
ಮಂಗಳೂರು, ಡಿ.15: ದ.ಕ. ಜಿಲ್ಲೆಯಲ್ಲಿ ನಡೆಯಲಿರುವ ಎರಡನೇ ಸುತ್ತಿನ ಗ್ರಾಪಂ ಚುನಾವಣೆಗೆ ಮಂಗಳವಾರ 1,824 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬೆಳ್ತಂಗಡಿ ತಾಲೂಕಿನಲ್ಲಿ 660, ಪುತ್ತೂರಿನಲ್ಲಿ 434 ಮತ್ತು ಸುಳ್ಯ ತಾಲೂಕಿನಲ್ಲಿ 350, ಕಡಬ ತಾಲೂಕಿನಲ್ಲಿ 380 ನಾಮಪತ್ರಗಳು ಸಲ್ಲಿಕೆಯಾಗಿವೆ. ಬುಧವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜಿಲ್ಲೆಯಲ್ಲಿ ಒಟ್ಟು 3,222 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 1,681 ಸ್ಥಾನಗಳಿಗೆ ಮತ್ತು ದ್ವಿತೀಯ ಹಂತದಲ್ಲಿ 1,541 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.