ಡಿ. 18ರಂದು ನಾಗರಾಜ್ ಖಾರ್ವಿಯಿಂದ ಕಾಲಿಗೆ ಸರಪಳಿ ಬಿಗಿದು ಈಜು
Update: 2020-12-16 11:35 IST
ಮಂಗಳೂರು : ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಡಿ.18 ರಂದು ಬೆಳಗ್ಗೆ ಮಂಗಳೂರಿನ ತಣ್ಣೀರು ಬಾವಿ ಬಳಿ ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರವನ್ನು ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಈಜಲಿದ್ದಾರೆ.
ಈ ಕುರಿತು ಬುಧವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.